Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಮುಂದಿನ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಮುಂದೆ ಸಾಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ ಬೆಳೆಸಿದೆ. ಐದು ವರ್ಷ ನನ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿ, ಈಗ ಡಿಸಿಎಂ ಹುದ್ದೆ ನೀಡಿದೆ ಎಂದರು.

ಇಷ್ಟಾದ ಮೇಲೆ ನಾನು ನನ್ನ ಮುಖ ತೋರಿಸಿ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡದಿದ್ದರೆ ನನ್ನ ನಾಯಕತ್ವ ನೀಡಿದಿದ್ದರೆ ಹೇಗೆ? ನಾನು ಮನೆಯಲ್ಲಿ ಕೂರಲು ಕಾಂಗ್ರೆಸ್‌ ಪಕ್ಷ ನನಗೆ ಇಷ್ಟು ಶಕ್ತಿ ನೀಡಿದೆಯೇ? ಎಂದು ಪ್ರಶ್ನೆ ಮಾಡಿದರು.

ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

 

Tags:
error: Content is protected !!