ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆದರೆ ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರ ನಡೆ ಸಂವಿಧಾನ ಬಾಹಿರ. ರಾಜ್ಯಪಾಲರು ಅವರು ರೆಡಿ ಮಾಡಿದ ಭಾಷಣವನ್ನು ಓದುವ ಹಾಗಿಲ್ಲ. ಸರ್ಕಾರ ರೆಡಿ ಮಾಡಿದ ಭಾಷಣ ಓದಬೇಕು. ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





