ರಾಜ್ಯ

ರಾಜ್ಯದ ಹಿತಕ್ಕಾಗಿ ಪ್ರಧಾನಿ ಮುಂದೆಯೂ ದನಿ ಎತ್ತುತ್ತೇವೆ : ಎಚ್‌ಡಿಕೆ

ಬೆಂಗಳೂರು : ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ಆದ್ರೆ ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ. ಅದು ನಮ್ಮ ಬದ್ಧತೆ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಎಚ್‌ಡಿಕೆ, ಟ್ವೀಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ. ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ? ಎಂದೂ ಪ್ರಶ್ನೆ ಮಾಡಿದ್ದಾರೆ.

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್‌ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ.

ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜೊತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ? ಎನ್ನುವುದು ನನಗೂ ತಿಳಿದಿದೆ. ಬರದ ಜೊತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು?

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ ಎಂದು ಸರಣಿ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

7 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago