ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟೆ ವಿಚಾರವನ್ನು ಪ್ರಕಟಿಸಬೇಕು. ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರೂ ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸ ಬೇಕಿದೆ ಎಂದರು.
ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತ್ರತವಾದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆಯಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ, ಇದು ಖಂಡನೀಯ ಎಂದರು.
ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳಿಗೆ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಕಠೋರವಾಗಿದೆ ಎಂದು ಹೇಳಿದರು.
ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಇರುವ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು.
ಜಾ.ದಳ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜಾ.ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…