Mysore
21
scattered clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ರೇವಣ್ಣ, ಪ್ರಜ್ವಲ್‌ ಯಾರೇ ಇದ್ರು ಕ್ರಮ: ಡಾ.ಜಿ.ಪರಮೇಶ್ವರ್

ಬೆಂಗಳೂರು:‌ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜಲ್ಯ ಆರೋಪ ಪ್ರಕರಣವನ್ನು ಎಸ್‌ಐಟಿಗೆ ನೀಡಿದ್ದೇವೆ. ವರದಿ ಬಂದ ಬಳಿಕ ಯಾರೇ ಇರಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಗೃಹ ಸಚಿವರು ರೇವಣ್ಣವಿರಲಿ, ಪ್ರಜ್ವಲ್‌ ಇರಲಿ ಯಾರೇ ಇದ್ರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಚಿತ ಎಂದಿದ್ದಾರೆ.

ಲೈಂಗಿಕ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ, ಅಗತ್ಯ ಬಿದ್ದರೆ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ.‌ ಎಸ್‌ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಭದ್ರತೆ ನೀಡುತ್ತೇವೆ ಎಂದು ತಿಳಿಸಿದರು.

Tags:
error: Content is protected !!