ಹುಬ್ಬಳ್ಳಿ: ನೇಹಾ ಹೀರೆಮಠ ಹತ್ಯೆ ಪ್ರಕರಣದ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆ ನಡೆದಿದ್ದು, ಅಂಜಲಿ ಪ್ರಕರಣವನ್ನು ಇನ್ನೆರೆಡು ದಿನಗಳಲ್ಲಿ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು(ಮೇ.೨೦) ಹುಬ್ಬಳ್ಳಿಯ ವೀರಾಪುರದಲ್ಲಿರುವ ಅಂಜಲಿ ನಿವಾಸಕ್ಕೆ ಗೃಹ ಮಂತ್ರಿ ಪರಮೇಶ್ವರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ದುರಾದೃಷ್ಟಕರವಾಗಿ ಹುಬ್ಬಳ್ಳಿಯಲ್ಲೇ ಎರಡು ಕೊಲೆ ಪ್ರಕರಣಗಳು ನಡೆದು ಹೋಗಿವೆ. ಅಂಜಲಿ ಕೊಲೆ ಆರೋಪಿ ಗಿರೀಶ್ ಪೊಲೀಸರ ವಶದಲ್ಲಿದ್ದು, ಆರೋಪಿಗೆ ಕಾನೂನಾತ್ಮಕ ಶಿಕ್ಷೆ ನೀಡಲು ಪೊಲೀಸ್ ಇಲಾಖೆ ಸಾಕ್ಷ್ಯದಾರಗಳನ್ನು ಕಲೆ ಹಾಕುತ್ತಿದೆ. ಈ ಸಂಬಂಧ ಪ್ರಕರಣವನ್ನು ಇಂದು ಅಥವಾ ನಾಳೆ ಸಿಐಡಿಗೆ ವಹಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಹತ್ಯೆಯಾದ ಅಂಜಲಿಯವರದ್ದು, ಕಡು ಬಡತನದ ಕುಟುಂಬವಾಗಿದೆ. ಈ ಎರಡು ಪ್ರಕರಣಗಳ ಮಾಹಿತಿಯನ್ನು ಬೆಂಗಳೂರಿನಲ್ಲೇ ಇದ್ದುಕೊಂಡು ಸಂಗ್ರಹಿಸುತ್ತಿದ್ದೆ. ಮಾನವೀಯ ದೃಷ್ಠಿಯಿಂದ ಎರಡು ಕುಟುಂಬಗಳ ಮನೆಗೆ ಭೇಟಿ ನೀಡಿದ್ದೇನೆ. ಜತೆಗೆ ಈ ಪ್ರಕರಣ ಸಂಬಂಧ ಪೊಲೀಸರಿಗೆ ಕೆಲ ಸೂಚನೆಗಳನ್ನು ನೀಡಬೇಕಿದೆ. ಹಾಗಾಗಿ ಹುಬ್ಬಳ್ಳಿಗೆ ಬಂದಿರುವುದಾಗಿ ಗೃಹ ಸಚಿವರು ತಿಳಿಸಿದರು.
ಇನ್ನು ನೇಹಾ ಹೀರೆಮಠ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಎಂದು ಕೂಗುಗಳು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಪೊಲೀಸ್ ಇಲಾಖೆ ಸಮರ್ಥರಿದ್ದಾರೆ, ಹೀಗಾಗಿ ಸಿಬಿಐಗೆ ಕೊಡುವುದಿಲ್ಲ. ಹೊರಗಿನವರಿಂದ ಕೆಲವು ಬಾರಿ ಇಂತಹ ಪ್ರಕರಣಗಳು ತನಿಖೆಯಾಗಬೇಕು ಹಾಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಸಮರ್ಥನೆ ನೀಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…