ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು ಅವರನ್ನು ಪ್ರಚಾರಕ್ಕೆ ಬಳಸಿಕೊಂಡು ಹಳೇ ಮೈಸೂರು ಭಾಗದ ಕ್ಷೇತ್ರಗಳನ್ನು ಗೆಲ್ಲಲ್ಲು ಶ್ರಮಿಸುತ್ತೇವೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ತಳ ಹಂತದಿಂದಲೂ ಹೊಂದಾಣಿಕೆ ಆಗಬೇಕು. ಹೀಗಾಗಿ ಎಲ್ಲಾ ಕಡೆಗಳಲ್ಲಿಯೂ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ. ಎಲ್ಲಾ ಅಸಮಧಾನಗಳು ಶಮನವಾಗಿದ್ದು, ನಾವು ಹಾಲು-ಜೇನಿನಂತೆ ಒಗ್ಗೂಡುತ್ತಿದ್ದೇವೆ ಎಂದು ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರ ಜೊತೆಗೆ ಮಾಜಿ ಕ್ರಿಕೇಟಿಗ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಶಿವರಾಮಗೌಡರು ಸಹಾ ಬಿಜೆಪಿ ಸೇರಿದ್ದಾರೆ.