ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆಯೇ? ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ‌. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದರು.

ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನ ಕಂಟ್ರೋಲ್‌ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬಿಸಿನೆಸ್ ಜಾಸ್ತಿ ಹೋಗ್ತಿತ್ತು. ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬಿಸಿನೆಸ್ ಕಂಟ್ರೋಲ್ ಆಗಲಿ ಎಂದು ಏರಿಕೆ ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನ ಮಾಡ್ತೀವಿ ಎಂದು ಹೇಳಿದರು.