ದಾವಣಗೆರೆ: ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ಎಂದಿರುವ ಸಿಎಂ ಸಿದ್ದರಾಮಯ್ಯ, ತಾವು ಈ ಹಿಂದೆ ಬಿಜೆಪಿ ಸರ್ಕಾರಕ್ಕೆ ಸಿದ್ದಗಂಗಾ ಸ್ವಾಮಿಜಿಗಳಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿರುವ ಬಗ್ಗೆ ಉಲ್ಲೇಖಿಸಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ನಡೆಯುತ್ತಿರುವ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು.
ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಗುತ್ತೆದಾರರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರೇ ಬಂದು ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಕೇಳಿರುವ ಬಗ್ಗೆ, ಅವರು ಕೇಳಲಿ ಬಿಡಿ. ಅವರು ಆಕಾಂಕ್ಷಿ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಕಾಂಗ್ರೆಸ್ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಯಾರಿಗೆ ನೀಡಬೇಕು ಅಂತಾ ನಿರ್ಧಾರ ಮಾಡ್ತೀವಿ ಎಂದು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…