virendra hegde
ಮಂಗಳೂರು: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ, ಮಹಿಳೆಯರೇ ಹೆಚ್ಚಾಗಿ ಕಣ್ಣೀರಿಟ್ಟಿದ್ದಾರೆ ಹಾಗೂ ವೇದನೆ ಪಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ನಡೆದ ಜೈನ ಮುನಿಗಳ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಇಂದು ಶ್ರೀ ಕ್ಷೇತ್ರಕ್ಕೆ ಬಹಳ ವಿಶೇಷವಾದ ಕಳೆ ಬಂದಿದೆ. ಇಷ್ಟೊಂದು ಆಶಯಧಾರಿಗಳು, ಆಶೀರ್ವವನ ನೀಡುತ್ತಿರುವುದು ತುಂಬಾ ದೊಡ್ಡದು. ಇಷ್ಟೊಂದು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬಂದಿರೋದು ಸಂತಸ ತಂದಿದೆ. ಇಂದು ಮೂಡಬಿದ್ರೆ ಭಟ್ಟಾರಕರ ಪಟ್ಟಾಭಿಷೇಕದ ದಿನ ಅವರು ಕೂಡ ನಿಮ್ಮೊಂದಿಗಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ. ಇದಕ್ಕಿಂತ ದೊಡ್ಡ ಮಾತು ನನಗೆ ಬೇಡ ಎಂದರು.
ಎಸ್‌ಐಟಿ ತನಿಖೆ ನಡೆಯುತ್ತಿರುವುದಿರಂದ ಹೆಚ್ಚು ಮಾತನಾಡಬಾರದು ಎಂದು ಸಂದೇಶ ಆಗಿದೆ. ಆದರೆ ಭಕ್ತರೊಬ್ಬರು ನನಗೆ ಹೇಳುತ್ತಿದ್ದರು. ಈ ಬೆಳವಣಿಗೆ ಆದಾಗಿನಿಂದ ಪುರುಷರಿಗಿಂತ ಮಹಿಳೆಯರು ಹೆಚ್ಚು ಕಣ್ಣೀರು ಹಾಕಿದ್ದಾರೆ. ವೇದನೆ ಪಡುತ್ತಿದ್ದಾರೆ. ನಮಗೆ, ಕುಟುಂಬಕ್ಕೆ ನೆಮ್ಮದಿಯಿಲ್ಲ, ನೀವೇ ಏನಾದರೂ ಮಾಡಿ ಎಂದು ಹೇಳಿಕೊಂಡಿದ್ದಾರೆ. ಕೆಲ ಹೆಣ್ಣು ಮಕ್ಕಳು ಯಾವುದೇ ರೀತಿಯ ಹೋರಾಟಕ್ಕೆ ಪ್ರತಿಭಟನೆಗೆ ತಯಾರಿದ್ದಾರೆ. ಆದರೆ ಅಂತಹ ಹೋರಾಟದ ಅಗತ್ಯವಿಲ್ಲ. ಎಲ್ಲವೂ ಸ್ವಾಮಿ ಮೇಲೆ ಬಿಟ್ಟಿದ್ದೇವೆ. ಅದರ ಫಲ ಈಗ ಸಿಗುತ್ತದೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜನಿವಾರ ಜಾತಿ ವೇಷಕ್ಕಲ್ಲ. ಮೂರು ಧರ್ಮಗಳನ್ನು ಆಚರಿಸೋದಕ್ಕಾಗಿ ಜನಿವಾರ ಧಾರಣೆ ಮಾಡುತ್ತೇವೆ. ಅದೇ ರೀತಿ ದಶಲಕ್ಷಣ ಇರೋದು ಪೂಜೆಗಲ್ಲ. ಪ್ರಾರ್ಥನೆ ಮಾಡೋಕೆ ಎಂದು ಹೇಳಿದರು.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…