ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರು ಮಾಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನು ಓದಿ : ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಸೆಪ್ಟೆಂಬರ್.27ರಿಂದ ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಈ ಎಲ್ಲಾ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.





