ಬೆಂಗಳೂರು : ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಇನ್ನು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರ್ಗಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




