ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ರಭಸ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಇರಲಿದೆ.
ಬಿರುಗಾಳಿ ಜೊತೆಗೆ ಧಾರಾಕಾರ ಮಳೆಯಾಗಲಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.




