ರಾಜ್ಯ

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗಾಳಿಯ ರಭಸ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಇರಲಿದೆ.

ಬಿರುಗಾಳಿ ಜೊತೆಗೆ ಧಾರಾಕಾರ ಮಳೆಯಾಗಲಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಅಲರ್ಟ್‌ ಘೋಷಣೆ ಮಾಡಿದೆ.

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

28 mins ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

3 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

3 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago