ರಾಜ್ಯ

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಕಡಲ ತೀರದಲ್ಲಿ ಕಟ್ಟೆಚ್ಚರ

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರುವ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಬೃಹತ್‌ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.

ಅರಬ್ಬಿ ಸಮುದ್ರ ತೀವ್ರ ಪ್ರಕ್ಷುಬ್ದಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 30-40 ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಣೆ ಮಾಡಿದ್ದು, ಸಮುದ್ರದ ಬಳಿ ಯಾರೂ ತೆರಳದಂತೆ ಸೂಚನೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ರಕ್ಷಣೆಗೆ ಲೈಫ್‌ ಗಾರ್ಡ್‌, ಹೋಂ ಗಾರ್ಡ್‌ಗಳನ್ನು ನೇಮಕ ಮಾಡಲಾಗಿದೆ. ಕಡಲ ತೀರಕ್ಕೆ ಪ್ರವಾಸಿಗರು ತೆರಳದಂತೆ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕರು, ಸ್ಥಳೀಯರು, ಪ್ರವಾಸಿಗರು ಯಾರೂ ಸಮುದ್ರ ತೀರಕ್ಕೆ ಹೋಗಬಾರದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

1 hour ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

1 hour ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

1 hour ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

4 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

4 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

5 hours ago