ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜೂನ್.23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುತ್ತಿರುವ ಪರಿಣಾಮ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.





