Categories: ರಾಜ್ಯ

ಮುಂಗಾರು ಚೇತರಿಕೆ ; ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ

ಬೆಂಗಳೂರು : ಪೂರ್ವ ಮುಂಗಾರುಮಳೆ ಚೇತರಿಕೆ ಕಂಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ.

ಗುಡುಗು, ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಒಂದೆರೆಡು ಕಡೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಮುನ್ಸುಚನೆಗಳಿವೆ. ಉತ್ತರ ಒಳನಾಡಿನ ಒಂದೆರೆಡು ಕಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ.

ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಕಲ್ಯಾಣ ಕರ್ನಾಟಕದ ಬೀದರ್ ಸೇರಿದಂತೆ ಕೆಲವೆಡೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಹಾಗೂ ಗಂಟೆಗೆ ಸುಮಾರು 50 ಕಿ.ಮೀ. ವೇಗದ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಗಳಿವೆ.

ಕೊಡಗು, ಹಾಸನ, ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.

ಹೆಚ್ಚುಕಡಿಮೆ ಇದೇ ಪರಿಸ್ಥಿತಿ ಮುಂದಿನ 5 ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ. ಆದರೆ ವ್ಯಾಪಕವಾಗಿ ರಾಜ್ಯಾದ್ಯಂತ ಎಲ್ಲಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ವಿರಳ. ಪೂರ್ವ ಮುಂಗಾರು ಮಳೆಯಾಗಿರುವುದರಿಂದ ಗುಡುಗು, ಮಿಂಚು, ಸಿಡಿಲು, ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಕೆಲವೆಡೆ ಮಳೆಯಾಗುವುದು ಸಹಜ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

26 mins ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

32 mins ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

36 mins ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

2 hours ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

5 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

10 hours ago