ರಾಜ್ಯ

ಮದುವೆಗೆ ಹೊರಟಿದ್ದ ಬಸ್‌ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ

ಕನಕಪುರ(ರಾಮನಗರ ಜಿಲ್ಲೆ): ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಸಂಗಮ ಸಮೀಪ ನಡೆದಿದೆ.

ಗಾಯಾಳುಗಳನ್ನು ಕನಕಪುರದ ಐಪಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಗಡೇಗೌಡನದೊಡ್ಡಿ ಗ್ರಾಮದ ಗಂಡು ಮತ್ತು ಹೆಣ್ಣಿನ ಮದುವೆಯನ್ನು ಮಡಿವಾಳದಲ್ಲಿ ಆಯೋಜಿಸಲಾಗಿತ್ತು. ಹೀಗಾಗಿ, ಬೆಳಿಗ್ಗೆಯ ಎರಡು ಖಾಸಗಿ ಬಸ್‌ಗಳಲ್ಲಿ ಗ್ರಾಮದ ಜನರು ಮದುವೆಗೆ ಹೊರಟಿದ್ದರು.

ಒಂದು ಬಸ್‌ ಸಂಗಮ ಸಮೀಪ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದರು.

 

ಗಾಯಳು ಆರೋಗ್ಯ ವಿಚಾರಿಸಿ  ಮಾಜಿ ಸಂಸದ ಡಿಕೆ ಸುರೇಶ್

ಗಾಯಾಳುಗಳನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಂಸದ ಡಿಕೆ ಸುರೇಶ್ ,  ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.

ಮದುವೆಯ ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲಿ ಈ ರೀತಿಯ ಆಘಾತವುಂಟಾಗಿರುವುದು ದುಃಖದ ವಿಚಾರ. ಆದಷ್ಟು ಬೇಗ ಎಲ್ಲರೂ ಗುಣಮುಖರಾಗಲಿ ಎಂದು ಹಾರೈಸಿ,  ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

41 mins ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

12 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

12 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

13 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

13 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

13 hours ago