ರಾಜ್ಯ

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ
ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಇಂದು ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದರು.

ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದರು.

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ನಾಳೆಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.

ವಿಶೇಷ ಪ್ಯಾಕೇಜ್ ಗೆ ಒತ್ತಾಯ:
ಈಗಾಗಲೇ ಇರುವ 16114 ಚ.ಕಿ.ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ:
ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು.

ರಾಜೇಗೌಡರ ಮನವಿ:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿರುತ್ತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇಂದು ನಡೆದ ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

7 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

7 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

8 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

8 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

10 hours ago