ರಾಜ್ಯ

ಹಿಂದುಳಿದವರು-ದಲಿತರು BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿದ್ದರಾಮಯ್ಯ ಬೇಸರ

ಬೆಂಗಳೂರು : ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಉದ್ಘಾಟಿಸಿ ಮಾತನಾಡಿದರು.

ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ BJP-RSS ಸೇರಿ ಇವರೇ ಮೂಲ RSS ನವರಿಗಿಂತ, ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು.

ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ ಎನ್ನುವುದನ್ನು ವಿವರಿಸಿದರು.

ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವತು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದರು.

ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.

ಇದನ್ನೂ ಓದಿ :-ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆ

ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ ಎಂದರು.

ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು.

ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಧಿಕ್ಷಣ ಪ್ರಮಾಣ ಶೇ68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದರು.

ವಿದ್ಯಾವಂತರು ವಿದ್ಯೆ ಪಡೆದಷ್ಟೂ ಮೌಡ್ಯವನ್ನು ಹೆಚ್ಚೆಚ್ಚು ನಂಬುತ್ತಾರೆ. ಬಡತನಕ್ಕೆ ಹಣೆಬರಹ ಕಾರಣ ಎಂದು ನಂಬುವವರು ಇನ್ನೂ ಇದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾವಂತರೂ ಮೌಡ್ಯವನ್ನು ನಂಬುತ್ತಾರೆ ಎಂದರು.

ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ ಎಂದರು‌.

ಅದಕ್ಕೇ ಆರ್ಥಿಕ, ಸಾಮಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದರು.

ಮೀಸಲಾತಿ ಮಿತಿ ಶೇ75ಕ್ಕೆ ಹೆಚ್ಚಿಸಲೂ ಸಿದ್ಧ: ಸಿ.ಎಂ.ಸಿದ್ದರಾಮಯ್ಯ
ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನಗೆ ಕೊನೆಯ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಮತ್ತೆ ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ನನಗೆ ಕೇಳಿದರು ಎಂದು ಸಿಎಂ ನುಡಿದರು.

ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿ‌ಮಾಡಲು ಬದ್ದವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago