ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು.
ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್ ಹಾಸನ್ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ ಅವರು ನೇರ ಉತ್ತರ ನೀಡದೆ ತಾವು 30 ವರ್ಷಗಳ ಹಿಂದೆ ಹೊಂದಿದ್ದ ಅದೇ ಅಭಿಪ್ರಾಯ ಈಗಲೂ ಹೊಂದಿರುವುದಾಗಿ ಹೇಳಿದರು.
ಡಿಸೆಂಬರ್ 6, 1992 ರಂದು ಬಾಬ್ರಿ ಮಸೀದಿ ಧ್ವಂಸದ ಸಂದರ್ಭದ ತಮ್ಮ ಹೇಳಿಕೆಯನ್ನು ಕಮಲ್ ಹಾಸನ್ ಉಲ್ಲೇಖಿಸುತ್ತಿದ್ದರು. ಆ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಕೆಲವೇ ಕೆಲವು ಸೆಲೆಬ್ರಿಟಿಗಳಲ್ಲಿ ಆಗ ಕಮಲ್ ಒಬ್ಬರಾಗಿದ್ದರು.
“ಬಾಬ್ರಿ ಮಸೀದಿ ಧ್ವಂಸಗೊಳಿಸುವ ಹಕ್ಕು ಯಾರಿಗೂ ಇರಲಿಲ್ಲ. ತಂಜಾವೂರು ದೇವಸ್ಥಾನ ಮತ್ತು ವೆಲೆಂಕಣ್ಣಿ ಚರ್ಚ್ ಹೇಗೆ ನನ್ನದೋ ಅದೇ ರೀತಿ ಆ ಕಟ್ಟಡ ಕೂಡ ನನ್ನದು,” ಎಂದು ಅವರು ಆಗ ಹೇಳಿದ್ದರು.
ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸಹಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು 2020ರಲ್ಲಿ ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದಾಗ ಕಮಲ್ ಹಾಸನ್ ಮಾಡಿದ್ದ ಟ್ವೀಟ್ ಕೂಡ ಗಮನ ಸೆಳೆದಿತ್ತು.
“ಗಟ್ಟಿಯಾದ ಪುರಾವೆ ಮತ್ತು ಬಲವಾದ ವಾದಗಳನ್ನು ಮಂಡಿಸದೇ ಇರುವುದು ಪ್ರಾಸಿಕ್ಯೂಶನ್‌ನ ಬೇಜವಾಬ್ದಾರಿಯಾಗಿದೆಯೇ ಅಥವಾ ಇದೊಂದು ಯೋಜಿತ ಕ್ರಮವೇ? ನ್ಯಾಯಕ್ಕಾಗಿ ಭಾರತೀಯರ ಆಶಾವಾದ ನಿಷ್ಪ್ರಯೋಜಕವಾಗಬಾರದು,” ಎಂದು ಕಮಲ್ ಹಾಸನ್ ಆಗ ಟ್ವೀಟ್ ಮಾಡಿದ್ದರು.
ಮಹಾತ್ಮ ಗಾಂಧೀಜಿ ಅವರ ಹತ್ಯೆಯನ್ನಾಧರಿತ ಹೇ ರಾಮ್ ಸಹಿತ ತಮ್ಮ ಸಿನಿಮಗಾಗಳಲ್ಲೂ ಬಲಪಂಥೀಯ ತೀವ್ರವಾದದ ಟೀಕಾಕಾರರಾಗಿದ್ದಾರೆ ಕಮಲ್ ಹಾಸನ್. ಆದರೆ ಅವರ ಸಿನಿಮಾ ವಿಶ್ವರೂಪಂ ಮುಸ್ಲಿಮರನ್ನು ಬಿಂಬಿಸಿದ ರೀತಿಗಾಗಿ ಆ ಸಮುದಾಯದಿಂದ ಟೀಕೆಗೊಳಗಾಗಿತ್ತು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…