ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಅವರು ಇಂದು(ಜೂ.16) ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಅವರ ಪತ್ನಿ ಹಾಗೂ ಹುಟ್ಟುವ ಮಗುವಿಗೆ ನ್ಯಾಯ ಸಿಗಬೇಕು. ಮಾಧ್ಯಮದಲ್ಲಿ ತೋರಿಸುತ್ತಿರುವುದನ್ನು ನೋಡಿ ಎಲ್ಲ ಮಾಹಿತಿ ತಿಳಿದುಕೊಂಡಿದ್ದೇನೆ. ಸತ್ಯ ಹೊರ ಬರಬೇಕು ಅಂತ ಪೊಲೀಸ್ ಹಾಗೂ ಮಾಧ್ಯಮದವರು ಕೆಲಸ ಮಾಡುತ್ತಿದ್ದಾರೆ. ಅವರ ಪರ, ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತಹ ಕೆಲಸ ಆಗಲಿ ಎಂದು ಹೇಳಿದ್ದಾರೆ.
ಯಾರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಸಿಗಲಿ. ಹುಟ್ಟುವ ಮಗು ಹಾಗೂ ಕುಟುಂಬಕ್ಕೆ ನ್ಯಾಯ ಸೀಗಬೇಕಿದೆ. ಚಿತ್ರರಂಗದ ಸಂಪೂರ್ಣ ವಾತಾವರಣ ಸದ್ಯ ಸರಿಯಾಗಿಲ್ಲ. ಕನ್ನಡ ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಚಿತ್ರರಂಗದ ಮೇಲೆ ಕಪ್ಪುಚುಕ್ಕೆ ಬರೋದು ನಮಗೆ ಇಷ್ಟವಿಲ್ಲ. ಈ ಚಿತ್ರರಂಗವನ್ನು ಎಷ್ಟೋ ಜನರು ಕಟ್ಟಿ ಬೆಳಸಿದ್ದಾರೆ. ಅದನ್ನು ನಾವು ಕಾಪಾಡಿಕೊಂಡು ಹೋಗಬೇಕು. ಇಡೀ ಚಿತ್ರರಂಗಕ್ಕೆ ನ್ಯಾಯ ಸಿಗಬೇಕಾಗಿದೆ ಎಂದರು.
ಯಾರನ್ನು ಬ್ಯಾನ್ ಮಾಡುವ ವಿಚಾರ ಇಲ್ಲ, ಆ ಸಂಸ್ಕೃತಿ ನಮ್ಮಲ್ಲಿಲ್ಲ. ನಮಗೆ ಬ್ಯಾನ್ ಮುಖ್ಯವಲ್ಲ, ನ್ಯಾಯ ಮುಖ್ಯ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…