ರಾಜ್ಯ

ಕರ್ನಾಟಕ ಬಜೆಟ್‌| ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್‌ ನೀಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಭದ್ರ ಬುನಾದಿ ಹಾಕಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದು.

ಅವುಗಳು ಈ ಕೆಳಕಂಡಂತಿವೆ.

1. ಗುರಿ-ಒಲಿಂಪಿಕ್ ಪದಕ ಯೋಜನೆ: 60 ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ.
2. ಕ್ರೀಡಾಂಗಣ ನಿರ್ಮಾಣ: 20 ಎಕರೆ ನವೀಕರಿಸುವ ಯೋಜನೆ.
3. ಕ್ರೀಡಾಂಗಣ ಅಭಿವೃದ್ಧಿ: ದಕ್ಷಿಣ ಕನ್ನಡ ಮತ್ತು ಉಡುಪಿ 6 ಕೋಟಿ.
4. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ: 12 ತಾಲ್ಲೂಕುಗಳಿಗೆ 12 ಕೋಟಿ ರೂ.
5. ಕ್ರೀಡಾ ರೇಂಜ್ ನಿರ್ಮಾಣ: 3 ವರ್ಷಗಳಲ್ಲಿ 3 ಕೋಟಿ ವೆಚ್ಚ.
6. ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ: 2 ಕೋಟಿ ರೂ. ಮೀಸಲು.
7. ಕೋಡಿಗೆ ಕ್ರೀಡಾ ಶಾಲೆ: 3 ಕೋಟಿ ರೂ. ಉನ್ನತೀಕರಣ.
8. ಯಾದಗಿರಿಯ ಕ್ರೀಡಾ ವಸತಿ ಶಾಲೆ: 10 ಕೋಟಿ ರೂ. ಪ್ರಾರಂಭ.
9. ಕ್ರೀಡಾ ವಿಜ್ಞಾನ ಕೇಂದ್ರ: ಮೈಸೂರು, ಬೆಳಗಾವಿ 7 ಕೋಟಿ.
10. ಈಜು ಕೊಳಗಳು ನವೀಕರಣ: 2 ಕೋಟಿ ರೂ. ನಿರ್ಮಾಣ.
11. ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ: 15% ಮತ್ತು 25% ವಿನಾಯಿತಿ.
12. ಆಟದ ಮೈದಾನ ನಿರ್ಮಾಣ: 100 ಶಾಲೆಗೆ 5 ಲಕ್ಷ ರೂ.
13. ನಿವೃತ್ತಿ ಕ್ರೀಡಾಪಟುಗಳ ಮಾಸಾಶನ ಹೆಚ್ಚಣೆ: 6,000, 5,000, 4,500 ರೂ.
14. ಪದಕ ವಿಜೇತರಿಗೆ ಮಾರ್ಗದರ್ಶನ: 1.ಒಲಿಂಪಿಕ್ಸ್, ಕಾಮನ್‌ವೆಲ್ತ್, ಏಷಿಯನ್.
15. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಅಭಿವೃದ್ಧಿಗೆ 6 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

3 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

3 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

3 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

3 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

3 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

3 hours ago