ಮೈಸೂರು: ತನ್ನ ಅಭಿಮಾನಿಯನ್ನೇ ಕೊಲೆ ಮಾಡಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ದರ್ಶನ್ ಬಂಧನವಾಗಿ ಮೂರು ದಿನವಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂ.14) ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ ಕೇಸ್ ಬಗ್ಗೆ ಪ್ರಭಾವಿಗಳೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಕೇವಲ ಸುದ್ದಿ, ದರ್ಶನ್ ಕೇಸ್ ಬಗ್ಗೆ ಮಾತುಕತೆಗೆ ಯಾವ ಪ್ರಭಾವಿಗಳು ನನ್ನನ್ನು ಭೇಟಿ ಮಾಡಿಲ್ಲ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ, ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುಗ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪೊಲೀಸ್‌ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಇದರಿಂದ ಯಾರಿಗೂ ಸಮಸ್ಯೆಯಾಗಿಲ್ಲ. ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.