ಬೆಂಗಳೂರು: ಪ್ರತಿಯೊಂದು ವಿಷಯಕ್ಕೂ ಬಾಯಿ ಹಾಕುವ ಮಾಜಿ ಸಂಸದ ಪ್ರತಾಪ್ ಸಿಂಹ ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರುವ ಸಲುವಾಗಿ ಮೈಸೂರಿನ ಪತ್ರಕರ್ತರ ಕೈ ಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತೆಗೆದುಕೊಳ್ಳಿ ಎಂದು ಅಂಗಲಾಚುತ್ತಿದ್ದಾರೆ.
ಇದನ್ನು ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ ಹೆಚ್ಚಿಸಿದ ಸರ್ಕಾರ
ಎಲ್ಲಾ ವಿಷಯಗಳಿಗೂ ಬಾಯಿ ಹಾಕುವ ಪ್ರತಾಪ್ ಸಿಂಹ ಅವರು ಬಿಜೆಪಿ ಪಕ್ಷದ ಯಾವ ಪೊಸಿಷನ್‌ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ.
ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು. ಪ್ರತಾಪ್ ಸಿಂಹ ಅವರೇ ನರೇಂದ್ರ ಮೋದಿಯವರು ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ? ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕಥೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…