ರಾಜ್ಯ

ರಾಜ್ಯಪಾಲರಿಗೂ, ಕಾನೂನು ವ್ಯವಸ್ಥೆಗೂ ಏನು ಸಂಬಂಧ?: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಯಲಿದೆ ಎಂಬ ಕಾಂಗ್ರೆಸ್‌ ನಾಯಕ ಹರಿಪ್ರಸಾದ್‌ ಹೇಳಿಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್‌ ಅವರು ಮಧ್ಯಸ್ಥಿಕೆ ವಿಹಿಸುತ್ತಿದ್ದು, ಕಾನೂನು ವ್ಯವಸ್ಥೆಗೂ, ರಾಜ್ಯಪಾಲರಿಗೂ ಏನು ಸಂಬಂಧ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಈ ಸಂಬಂಧ ರಾಜ್ಯಪಾಲರು ಪದೇ ಪದೇ ತನಿಖೆ ಆಗುತ್ತಿದೆಯೇ ಎಂದು ಕೇಳುತ್ತಿದ್ದು, ಒತ್ತಡ ಹಾಕುತ್ತಿದ್ದಾರೆ. ರಾಜ್ಯಪಾಲರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯವರು ಕೇಳಿದ್ದಾರೆ. ರಾಜ್ಯಪಾಲರಿಗೆ ಯಾಕಿಷ್ಟು ಆಸಕ್ತಿ ಎಂಬುದನ್ನು ಗಮನಿಸಬೇಕು. ರಾಜ್ಯಪಾಲರಿಗೆ ಕೇಂದ್ರ ಸರ್ಕಾರದ ನಿರ್ದೇಶನವಿದೆಯಾ ಅಥವಾ, ಸರ್ಕಾರ ಮತ್ತು ಹರಿಪ್ರಸಾದ್‌ಗೆ ಮುಜುಗರ ತರಬೇಕು ಎಂದು ಇದೆಯಾ? ಏನೇ ಇದ್ದರೂ ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ. ರಾಜ್ಯಪಾಲರಿಗೂ, ಕಾನೂನು ವ್ಯವಸ್ಥೆಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ಎಲ್ಲೆಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇಲ್ಲ ಅಲ್ಲಲ್ಲಿ ರಾಜ್ಯಪಾಲರ ಮೂಲಕ ಆಳ್ವಿಕೆ ಮಾಡಲು ಹೊರಟಿದ್ದಾರೆ. ಹಿಂದಿನ ಸರ್ಕಾರ ಇದ್ದಾಗ ಯಾವತ್ತೂ ಈ ರೀತಿ ಆಗಿಲ್ಲ. ಈ ಬಾರಿ ಯಾಕೆ ಈ ರೀತಿ ಆಗುತ್ತಿದೆ. ಜನ ಇದರ ಬಗ್ಗೆ ವಿಚಾರ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.

 

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

32 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

49 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

8 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago