ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಪ್ರಸ್ತಾಪಿಸಿದರು.
ಇದನ್ನು ಓದಿ: ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು
ಇದಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ. ಖಾಲಿ ಹುದ್ದೆಗಳ ಕುರಿತು ಮಾಹಿತಿ ಸಂಗ್ರಹಿಸುವ ಕೆಲಸ ಆಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಶಿಕ್ಷಕರ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಎಂಎಲ್‌ಸಿ ವಿ.ಎಸ್.ಸಂಜನೂರು ಅವರು, ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆ ಭರ್ತಿಗೆ ಅನುಮತಿ ಕೊಟ್ಟಿಲ್ಲ. 1600 ಅನುದಾನಿತ ಶಿಕ್ಷಕರ ಭರ್ತಿಗೆ ಅನುಮತಿ ಕೊಡಿ ಎಂದು ಮನವಿ ಮಾಡಿದರು.





