ಬೆಳಗಾವಿ : ಸಿದ್ದರಾಮಯ್ಯ ನಂತರ ಅಹಿಂದ ನಾಯಕತ್ವ ವಹಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಸಮರ್ಥರಾಗಿದ್ದಾರೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಭಾರಿ ಕರ್ನಾಟಕದಲ್ಲಿ ರಾಜ್ಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ನವೆಂಬರ್ ಮೊದಲ ದಿನಕ್ಕೆ ಇನ್ನೇನು ಕೆಲವೇ ದಿನಕ್ಕೂ ಮುನ್ನವೇ ನವೆಂಬರ್ ಕ್ರಾಂತಿ ಬಗ್ಗೆ ಭಾರಿ ಪೈಪೋಟಿ ಜೋರಾಗಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ಯತೀಂದ್ರ ಹೇಳಿದ್ದು ಅಹಿಂದ ನಾಯಕತ್ವದ ಬಗ್ಗೆ : ಸತೀಶ ಜಾರಕಿಹೊಳಿ ಸ್ಪಷ್ಟನೆ
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯತೀಂಂದ್ರ ಸಿದ್ದರಾಮಯ್ಯನವರು ಅಹಿಂದ ನಾಯಕತ್ವದ ಬಗ್ಗೆ ಮಾತನಾಡಿದ್ದು, ಸಿಎಂ, ಡಿಸಿಎಂ ಬದಲಾವಣೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಅಲ್ಲ. ಪಕ್ಷವೇ ಬೇರೆ, ಅಹಿಂದ ಸಂಘಟನೆಯೇ ಬೇರೆ. ಸಿಎಂ ಸ್ಥಾನಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಯತೀಂದ್ರ ಹೇಳಿಕೆಯಲ್ಲಿ ತಪ್ಪೇನಿದೆ?
ಯತೀಂದ್ರ ಅವರು ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ಅವರ ದಾರಿಯಲ್ಲೇ ಹೋಗ್ತಾರೆ ಸತೀಶ್ ಅಂತ ಹೇಳಿದ್ದಾರೆ ಅಹಿಂದ ಪ್ರಾರಂಭ ಆದಾಗ ಸತೀಶ್ ಜಾರಕಿಹೊಳಿ ಬಹಳ ಮುಖ್ಯ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಅವರು ಹೇಳಿದ್ದಾರೆ ಅದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.





