Mysore
32
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸರ್ಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು- ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ. ಸಿರಿವಂತರು ಗ್ಯಾರಂಟಿ ಯೋಜನೆ ಬಿಟ್ಟುಕೊಟ್ಟರೆ ತಪ್ಪಿಲ್ಲ ಎಂದು ಹೇಳಿದರು.

ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ ಎಂದಿದ್ದಾರೆ. 200 ಯೂನಿಟ್‌ ಉಚಿತ ವಿದ್ಯುತ್‌ ಬಗ್ಗೆಯೂ ಹೇಳಿದ್ದಾರೆ. ಅದಕ್ಕೆ ನಾವು ಆ ಬಗ್ಗೆ ವಿಮರ್ಶೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಈ ಬಜೆಟ್‌ನಲ್ಲಿ ಒಳ್ಳೊಳ್ಳೆ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡುತ್ತದೆ ಎಂದು ಹೇಳಿದರು.

 

Tags:
error: Content is protected !!