ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸರ್ಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು- ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ. ಸಿರಿವಂತರು ಗ್ಯಾರಂಟಿ ಯೋಜನೆ ಬಿಟ್ಟುಕೊಟ್ಟರೆ ತಪ್ಪಿಲ್ಲ ಎಂದು ಹೇಳಿದರು.
ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ ಎಂದಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆಯೂ ಹೇಳಿದ್ದಾರೆ. ಅದಕ್ಕೆ ನಾವು ಆ ಬಗ್ಗೆ ವಿಮರ್ಶೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಈ ಬಜೆಟ್‌ನಲ್ಲಿ ಒಳ್ಳೊಳ್ಳೆ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡುತ್ತದೆ ಎಂದು ಹೇಳಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…