ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ಎಫ್‌ಐಆರ್ ದಾಖಲಿಸಿ ಸುಮಾರು 4 ವರ್ಷಗಳಾದರೂ ಅಂತಿಮ ವರದಿ ಸಲ್ಲಿಸದಿರುವ ಕುರಿತು ಶುಕ್ರವಾರ ಹೈಕೋರ್ಟ್(ಏ.೫) ಮೌಖಿಕವಾಗಿ ಪ್ರಶ್ನಿಸಿದೆ.
ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ವಿಚಾರಣೆಯ ಅಂತಿಮ ಹಂತದಲ್ಲಿ ನ್ಯಾ. ಅಡಿಗ ಅವರು ಸಿಬಿಐ ಇನ್ನೂ ವಿಚಾರಣೆ ಆರಂಭಿಸಿಲ್ಲವೇ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಧ್ವನಿಗೂಡಿಸಿದ ನ್ಯಾ. ಸೋಮಶೇಖರ್ ಅವರು, ಸಿಬಿಐ ಯಾವಾಗ ಎಫ್‌ಐಆರ್ ದಾಖಲಿಸಿತು ಎಂದು ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ಪ್ರಶ್ನಿಸಿದರು.
ಇದಕ್ಕೆ ಪ್ರಸನ್ನ ಕುಮಾರ್ ಅವರು 2020ರ ಅಕ್ಟೋಬರ್ 3ರಂದು ಎಫ್‌ಐಆರ್ ದಾಖಲಿಸಲಾಗಿದೆ. ಎರಡು ವರ್ಷ ಕೋವಿಡ್‌ನಿಂದಾಗಿ ತನಿಖೆ ನಡೆಸಲಾಗಿಲ್ಲ. ಒಂದು ವರ್ಷ ಅರ್ಜಿದಾರರು ಪ್ರಕರಣದ ವಿಚಾರಣೆಗೆ ತಡೆ ಪಡೆದುಕೊಂಡಿದ್ದರಿಂದ ಯಾವುದೇ ಬೆಳವಣಿಗೆಯಾಗಿಲ್ಲ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಆರು ಅರ್ಜಿಗಳನ್ನು ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದ್ದಾರೆ ಎಂದರು. ಈ ಸಂಬಂಧ ವಿಸ್ತೃತ ಬೆಳವಣಿಗೆಯನ್ನು ನ್ಯಾಯಾಲಯದ ಮುಂದಿಡಲಾಗುವುದು ಎಂದು ಸಮಜಾಯಿಷಿ ನೀಡಿದರು. ವಾದ ಆಲಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್ 18ಕ್ಕೆ ವಿಚಾರಣೆ ಮುಂದೂಡಲಾಯಿತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…