ರಾಜ್ಯ

ದೇವರಾಜ ಅರಸು ಎಲ್ಲಿ? ಇವರೆಲ್ಲಿ? : ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಆಕ್ರೋಶ

ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕರ್ನಾಟಕದಲ್ಲಿ ದೀರ್ಘ ಕಾಲ ಆಡಳಿತ ನಡೆಸಿದ್ದೇನೆ ಎಂಬುದಾಗಿ ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಕೆಟ್ಟ ಆಡಳಿತಕ್ಕೆ ನಿದರ್ಶನ. ಅವರ ಆಡಳಿತದ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದ್ದ ಕರ್ನಾಟಕ ಇಂದು ಅದಕ್ಷ, ಕೆಟ್ಟ ಆಡಳಿತಕ್ಕೆ ನಿದರ್ಶನ ಆಗಿದೆ. ದೇವರಾಜು ಅರಸು ಎಲ್ಲಿ? ಇವರಲ್ಲಿ? ಅರಸು ಅವರ ದಾಖಲೆ ಮುರಿಯುವುದು ಇರಲಿ, ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ. ಕಾಂಗ್ರೆಸ್ಸಿಗೆ ಮತದಾರರು ಬುದ್ಧಿ ಕಲಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿಕೊಳ್ಳುವ ಇವರಿಗೆ ಮತದಾರರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಕಳೆದ ಎರಡೂವರೆ ವರ್ಷಗಳ ಆಡಳಿತ ಇತಿಹಾಸ ಸೇರುವಂತಹ ಕೆಟ್ಟ ಆಡಳಿತವಾಗಿದೆ, ಭ್ರಷ್ಟಾಚಾರ, ಕೊಲೆ, ಸುಲಿಗೆ, ಡ್ರಗ್ಸ್ ಮಾಫಿಯಾ, ಮಾರ್ಯಾದಾ ಹತ್ಯೆ ಪ್ರಕರಣಗಳು ನಿರಂತರವಾಗಿವೆ. ಇದನ್ನು ಹತ್ತಿಕ್ಕಲು ಸಾಧ್ಯವಾಗದೆ, ದಾಖಲೆಗೋಸ್ಕರ ಸಿದ್ದರಾಮಯ್ಯ ಆಡಳಿತ ನಡೆಸುತ್ತಿರುವಂತಿದೆ. ಅಧಿಕಾರಿಗಳು ಗುಲಾಮರಾಗಿದ್ದಾರೆ. ಅಧಿಕಾರಿಗಳು ಇವರ ಆಡಳಿತದಲ್ಲಿ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ, ಸ್ವಾತಂತ್ರ್ಯ ಎಂಬುದೇ ಇಲ್ಲ, ಬ್ಯಾಟರಿ ಹಾಕಿ ಹುಡುಕಿದರೂ ಒಬ್ಬ ಒಳ್ಳೆ ಅಧಿಕಾರಿ ಸಿಗುವುದಿಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.

ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಕಲಿಶ್ಯಾಮರಂತೆ ವರ್ತಿಸುತ್ತಿದ್ದಾರೆ, ಗೃಹ ಸಚಿವರಿಗೆ ಅಧಿಕಾರದ ಗತ್ತು ಎಂಬುದೇ ಗೊತ್ತಿಲ್ಲ, ಯಾವುದೇ ಪ್ರಕರಣ ನಡೆದರೂ ಎಸ್‌ಐಟಿ ರಚಿಸಿ ಕೈತೊಳೆದುಕೊಳ್ಳುವುದು, ನಾಜೂಕಯ್ಯನ ರೀತಿ ಮಾತನಾಡುವುದೊಂದೇ ತಿಳಿದಿರುವುದು ಎಂದು ಅವರು ಕಿಡಿಕಾರಿದರು.

ಓಂ ಶಕ್ತಿ ಭಕ್ತರ ಮೇಲೆ ಕಲ್ಲು; ಎಚ್ಡಿಕೆ ಖಂಡನೆ
ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲೆ ಹಾಕಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ಭಕ್ತರ ಮೇಲೆ ಕಲ್ಲು ಎಸೆದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಈ ಘಟನೆಯನ್ನು ಉಗ್ರವಾಗಿ ಖಂಡಿಸಿದ ಕೇಂದ್ರ ಸಚಿವರು; ಓಂ ಶಕ್ತಿಗೆ ಯಾತ್ರೆಗೆ ಹೊರಟಿರುವ ಹೆಣ್ಣು ಮಕ್ಕಳ ಮೇಲೆ ಕಲ್ಲು ಎಸೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿವೆ ಎಂಬುದು ಅರ್ಥವಾಗುತ್ತದೆ. ಇದಕ್ಕೆಲ್ಲಾ ಈ ಸರ್ಕಾರದ ನಡವಳಿಕೆಯೇ ಕಾರಣ ಎಂದು ಅವರು ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

6 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

6 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

6 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

6 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

6 hours ago