ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಆಗುತ್ತಿರುವ ಭಿನ್ನಾಭಿಪ್ರಾಯಗಳ ದುರ್ಬಳಕೆಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
ಸಚಿವ ಜಮೀರ್ ಅಹದ್‌ಖಾನ್ ಅವರನ್ನು ಮತ್ತೆ ಜಾ.ದಳಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬರುವ ಮುನ್ನವೇ ಅಲ್ಪಸಂಖ್ಯಾತ ನಾಯಕರ ಮೇಲೆ ಅನುಮಾನವೇಕೆ? ಅಲ್ಪಸಂಖ್ಯಾತರನ್ನು ನಾವೇ ರಕ್ಷಣೆ ಮಾಡುವುದು ಎಂದು ಹೇಳುವ ಕಾಂಗ್ರೆಸ್‌ನಲ್ಲಿ ಗೊಂದಲ ಏಕೆ ಮಾಡುತ್ತಿದ್ದಾರೆ. ಒಂದು ಸಮುದಾಯದ ಮೇಲೆ ಏಕೆ ಗದಾಪ್ರಹಾರ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಮೀರ್ ಅಹ್ಮದ್‌ಖಾನ್ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಅಲ್ಪಸಂಖ್ಯಾತ ನಾಯಕರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ? ಕ್ರಾಂತಿಯಾಗಲಿದೆ ಎಂದು ಹೇಳುತ್ತಿದ್ದರು. ಅದಕ್ಕಿದು ಮೂಲ ಆಗಬಹುದೆಂದು ಎಂದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…