ರಾಜ್ಯ

ಟಿಕೆಟ್‌ ಯಾರಿಗೇ ನೀಡಿದರು ಕೈ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ : ಕೆ.ಹೆಚ್‌.ಮುನಿಯಪ್ಪ

ಬೆಂಗಳೂರು:  ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಾನು 7 ಬಾರಿ ಗೆಲುವು ಸಾಧಿಸಿದ್ದೆ. ಅಲ್ಲಿ ಈ ಬಾರಿ ಬಿ.ಎಸ್.ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಕಾಂಗ್ರೆಸ್‍ನ ಭದ್ರಕೋಟೆ. ಇಲ್ಲಿ ಡಾ.ಎಂ.ಸಿ.ಸುಧಾಕರ್ ಉಸ್ತುವಾರಿ ಸಚಿವರಾಗಿದ್ದಾರೆ. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿದ್ದೇನೆ ಎಂದರು.

ಸಾಮಾನ್ಯವಾಗಿ ಇದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಮೂವರು ಸಚಿವರ ಜವಾಬ್ದಾರಿಯಾಗಿದೆ ಎಂದರು. ಇತ್ತೀಚೆಗೆ ಪಕ್ಷದ ವರಿಷ್ಠ ನಾಯಕರ ಸಭೆಯಲ್ಲಿ ನಾವು ಭಾಗವಹಿಸಿದ್ದು, ಎಲ್ಲರ ಅಭಿಪ್ರಾಯವನ್ನೂ ಹೇಳಿದ್ದೇವೆ. ಯಾರನ್ನೇ ಅಭ್ಯರ್ಥಿ ಮಾಡಿದರೂ ಕಾಂಗ್ರೆಸ್ ಗೆಲ್ಲಿಸುವ ವಾಗ್ದಾನ ಮಾಡಿದ್ದೇವೆ. ಅಭ್ಯರ್ಥಿಯ ಆಯ್ಕೆಯ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಬಿಡಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆಂದು ತಿಳಿಸಿದರು.

ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತೇವೆ. ಆದ್ಯತೆ ಮೇರೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿರುವ 5 ಮೀಸಲು ಲೋಕಸಭಾ ಕ್ಷೇತ್ರಗಳ ಪೈಕಿ ಸಾಮಾನ್ಯವಾಗಿ 2 ಬಲಗೈ ಹಾಗೂ ಇನ್ನೆರೆಡು ಎಡಗೈ ಸಮುದಾಯಕ್ಕೆ ಹಂಚಿಕೆ ಮಾಡಿ, ಒಂದು ಸ್ಥಾನವನ್ನು ಬೋವಿ ಅಥವಾ ಲಂಬಾಣಿಗೆ ನೀಡುವುದು ಸಂಪ್ರದಾಯ.

ಈ ಬಾರಿ ಮೂರೂ ಕ್ಷೇತ್ರಗಳನ್ನು ಬಲಗೈ ಸಮುದಾಯಕ್ಕೆ ನೀಡಲಾಗಿದೆ. ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ.ಯಾರಿಗೇ ಟಿಕೆಟ್ ಕೊಟ್ಟರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ. ಕಾಂಗ್ರೆಸ್ ಅನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

5 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago