Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ? : ಕೇಂದ್ರ ಸಚಿವೆ ಶೋಭಾ

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಸ್ತಕ್‌ ಅವರನ್ನು ಸರ್ಕಾರ ಆಯ್ಕೆಮಾಡಿದೆ. ಈ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ. ಅಂತೆಯೇ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಸಹ ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಯಾರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲವೋ, ಯಾರಿಗೆ ಮೂರ್ತಿ ಪೂಜೆ ಮೇಲೆ ನಂಬಿಕೆ ಇಲ್ಲವೋ ಅವರು ದಸರಾ ಉದ್ಘಾಟನೆಗೆ ಬಂದು ಏನು ಮಾಡುತ್ತಾರೆ. ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದೆ. ಲೇಖಕಿ ಬಾನು ಮುಷ್ತಾಕ್ ಅವರು ದೇವರಿಗೆ ಪುಷ್ಪಾರ್ಚನೆ ಮಾಡಲ್ಲ ಅಂತ ಭಾವಿಸುತ್ತೇನೆ. ಜಾತ್ಯತೀತೆಯ ಅರ್ಥ ಹಿಂದು ಧರ್ಮಕ್ಕೆ ವಿರೋಧ ಮಾಡು ಎಂಬುವುದಲ್ಲ. ಅವರಿಗೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆಯಾ ಹೇಳಲಿ. ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಪುಷ್ಪಾರ್ಚನೆಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.

Tags:
error: Content is protected !!