ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಸ್ತಕ್ ಅವರನ್ನು ಸರ್ಕಾರ ಆಯ್ಕೆಮಾಡಿದೆ. ಈ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ. ಅಂತೆಯೇ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಸಹ ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟನೆ ಏಕೆ ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಯಾರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲವೋ, ಯಾರಿಗೆ ಮೂರ್ತಿ ಪೂಜೆ ಮೇಲೆ ನಂಬಿಕೆ ಇಲ್ಲವೋ ಅವರು ದಸರಾ ಉದ್ಘಾಟನೆಗೆ ಬಂದು ಏನು ಮಾಡುತ್ತಾರೆ. ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದೆ. ಲೇಖಕಿ ಬಾನು ಮುಷ್ತಾಕ್ ಅವರು ದೇವರಿಗೆ ಪುಷ್ಪಾರ್ಚನೆ ಮಾಡಲ್ಲ ಅಂತ ಭಾವಿಸುತ್ತೇನೆ. ಜಾತ್ಯತೀತೆಯ ಅರ್ಥ ಹಿಂದು ಧರ್ಮಕ್ಕೆ ವಿರೋಧ ಮಾಡು ಎಂಬುವುದಲ್ಲ. ಅವರಿಗೆ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆಯಾ ಹೇಳಲಿ. ಚಾಮುಂಡೇಶ್ವರಿ ಮೇಲೆ ನಂಬಿಕೆ ಇದ್ದರೆ ಪುಷ್ಪಾರ್ಚನೆಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…