ರಾಜ್ಯ

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ.

ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ರದ್ದುಪಡಿಸುವಂತೆ ಕೋರಿ ನ್ಯಾಯಾಂಗ ಬಂಧನದಲ್ಲಿರು ಮೈಸೂರಿನ ಸಮೀರ್‌ ಖಾನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ವಕೀಲ ಆರ್.‌ ಮಹದೇವ ಅರ್ಜಿದಾರರನ್ನು ಮೈಸೂರಿನ ಬಿಇಒ ಕಚೇರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ದಾಖಲಾಗಿರುವ ಕಲಂಗಳು ಜಾಮೀನು ಪಡೆಯಲು ಅರ್ಹವಾಗಿವೆ. ಆದರೆ ವಿಚಾರಣಾ ಕೋರ್ಟ್‌ ಜಾಮೀನು ತಿರಸ್ಕರಿಸಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಈ ಮಾತಿಗೆ ನ್ಯಾಯಮೂರ್ತಿಗಳು, ಏನ್ರೀ ಇದು ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನೆಲ್ಲಾ ಸೆಟಲ್‌ ಮಾಡಲಾಗುತ್ತದೆಯೇ? ಹೀಗಾದರೆ ನಾಳೆ ಎಂಡಿಎಂಎ ಕೇಸುಗಳನ್ನೂ ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಬಹುದಲ್ಲವೇ ಎಂದು ಕಳವಳ ವ್ಯಕ್ತಪಡಿಸಿದರು.

ಇದೇ ವೇಳೆ ಮೈಸೂರಿನಲ್ಲೇ ಗಾಂಜಾ ಕೇಸುಗಳು ಯಾಕೆ ಜಾಸ್ತಿ ಎಂದು ಅರ್ಜಿದಾರರ ಪರ ವಕೀಲರನ್ನು ಕೌತುಕದಿಂದ ಪ್ರಶ್ನಿಸಿದ ನ್ಯಾಯಮೂರ್ತಿಗಳು, ಮುಂದೆ ಏನಾದರೂ ಈ ಆರೋಪಿಯ ಕೈಯಿಂದ ವಾಣಿಜ್ಯ ಉದ್ದೇಶದ ಹೊರತಾದ ಮೂರು ಗ್ರಾಂ ಗಾಂಜಾ ಸಿಕ್ಕರೂ ಬಿಡುವುದಿಲ್ಲ. ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಸಿ ಮಧ್ಯಂತರ ಮನವಿಯ ಅನುಸಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

14 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago