ಬೆಂಗಳೂರು : ಹಾಲಿನ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಿಯಾಗಿ ಓದಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದ ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಹೇಳುವ ಕುಮಾರಸ್ವಾಮಿ ಅವರಿಗೆ ವಿಚಾರದ ಬಗ್ಗೆ ಸರಿಯಾಗಿ ಓದಿಕೊಳ್ಳಿ ಎಂದು ತಿರುಗೇಟು ನೀಡಿದರು.
ಮುಂದುವರೆದು ಮಾತನಾಡಿದ ಅವರು, ನಾವು ಹಾಲಿನ ದರವನ್ನು ಹೆಚ್ಚು ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚಾಗಿರುವ ಕಾರಣ ಎರಡು ರುಪಾಯಿ ಹೆಚ್ಚಳ ಮಾಡಿದ್ದೇವೆ ಎಂದು ಹೇಳಿದರು.
ಹಾಲಿನ ದರ ಏರಿಕೆ ವಿಚಾರದಲ್ಲಿ ನಾವು ಹೊರ ರಾಜ್ಯಗಳಿಗೆ ಕಂಪೇರ್ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.





