ರಾಜ್ಯ

ಕುಮಾರಸ್ವಾಮಿಗೆ ಸರಿಯಾಗಿ ಓದಿಕೊಳ್ಳಿ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ ?

ಬೆಂಗಳೂರು : ಹಾಲಿನ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸರಿಯಾಗಿ ಓದಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಗರದ ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಹೇಳುವ ಕುಮಾರಸ್ವಾಮಿ ಅವರಿಗೆ ವಿಚಾರದ ಬಗ್ಗೆ ಸರಿಯಾಗಿ ಓದಿಕೊಳ್ಳಿ ಎಂದು ತಿರುಗೇಟು ನೀಡಿದರು.

ಮುಂದುವರೆದು ಮಾತನಾಡಿದ ಅವರು, ನಾವು ಹಾಲಿನ ದರವನ್ನು ಹೆಚ್ಚು ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚಾಗಿರುವ ಕಾರಣ ಎರಡು ರುಪಾಯಿ ಹೆಚ್ಚಳ ಮಾಡಿದ್ದೇವೆ ಎಂದು ಹೇಳಿದರು.

ಹಾಲಿನ ದರ ಏರಿಕೆ ವಿಚಾರದಲ್ಲಿ ನಾವು ಹೊರ ರಾಜ್ಯಗಳಿಗೆ ಕಂಪೇರ್‌ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

6 mins ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

13 mins ago

ದಸರಾ ಆಹಾರ ಮೇಳ: 100 ಮಳಿಗೆಗೆ 587 ಅರ್ಜಿ!

ಕೇಶವ ಎಂ. ರಾಜ್ಯದ ೩೦ ಜಿಲ್ಲೆಗಳಿಂದಲೂ ಅರ್ಜಿ ಸಲ್ಲಿಕೆ; ಲಾಟರಿ ಎತ್ತುವ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ; ಉದ್ಯಮಿಗಳ ಆಕ್ಷೇಪ ಮೈಸೂರು:…

30 mins ago

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

20 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

20 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

21 hours ago