Mysore
24
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

new law atrocities Kannadigas

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ.

ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಇಷ್ಟೊಂದು ನಡುಕವೇ? ಎಂದು ಟ್ವೀಟ್‌ನಲ್ಲಿ ಲೇವಡಿ ಮಾಡಿದೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ಹೇಡಿತನಕ್ಕೆ ಸಾಕ್ಷಿಯಾಗಿದೆ. ಸಚಿವರು ಹಾಗೂ ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಸರ್ಕಾರಕ್ಕೆ ಭಯವೇಕೆ ಎಂದು ಪ್ರಶ್ನೆ ಮಾಡಿದೆ.

ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಸಮಾಜವಾದಿ ಮುಖವಾಡ ತೊಟ್ಟ ಸರ್ಕಾರಕ್ಕೆ ಇಂದು ನಡುಕ ಶುರುವಾಗಿದೆ. ಮಾಧ್ಯಮಗಳ ಧ್ವನಿ ಅಡಗಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆಯಾಗಿದೆ. ಸರ್ಕಾರದ ಹಗರಣಗಳು, ಕಮಿಷನ್‌ ದಂಧೆ, ಟ್ರಾನ್ಸ್‌ಫರ್‌ ದಂಧೆಗಳು ಬಯಲಾಗುತ್ತವೆ ಎಂಬ ಆತಂಕದಿಂದ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯಲು ಸರ್ಕಾರ ಮುಂದಾಗಿದೆ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Tags:
error: Content is protected !!