ಬೆಂಗಳೂರು : ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಕಾಂಗ್ರೆಸ್ಗೆ ಸಿಟ್ಟು?. ಪ್ರತಿ ವಿಷಯದಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದರು.
ಸೋಮವಾರ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಜನ್ಮದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಕಾಂಗ್ರೆಸ್ಗೆ ಸಿಟ್ಟು?. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಒಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಜ್ಞಾನ. ಅದು ಎಲ್ಲರಿಗೆ ಸಿಗಬೇಕು ಎಂದು ಹೇಳಿದರು.