Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

ಆರ್ಥಿಕ, ಸಾಮಾಜಿಕ ಸಮೀಕ್ಷೆ ವಿಚಾರದಲ್ಲಿ ಸರ್ಕಾರಕ್ಕೆ ಯಾಕಿಷ್ಟು ಆತುರ?: ವಿಜಯೇಂದ್ರ ಪ್ರಶ್ನೆ

B.Y Vijayendra

ಬೆಂಗಳೂರು: ಕೆಲವರು ಹಿಂದೂ ಧರ್ಮ ಮತ್ತು ವೀರಶೈವ ಲಿಂಗಾಯಿತರನ್ನು ಒಡೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಕೆಲವರು ಪ್ರತ್ಯೇಕ ವೀರಶೈವ ಲಿಂಗಾಯಿತ ಧರ್ಮ ಮಾಡುವ ಮೂಲಕ ನಮ್ಮ ಸಮುದಾಯವನ್ನು ಒಡೆಯುವ ಪ್ರಯತ್ನ ಮಾಡಿದ್ದರು. ಇದರಲ್ಲಿ ಅವರು ಯಶಸ್ವಿಯಾಗಲಿಲ್ಲ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯನವರ ಹೆಸರು ಹೇಳದೆ ಕಿಡಿಕಾರಿದರು.

ಮತ್ತೆ ರಾಜ್ಯದಲ್ಲಿ ಪ್ರತ್ಯೇಕ ವೀರಶೈವ ಲಿಂಗಾಯಿತ ಧರ್ಮ ರಚನೆಯಾಗಬೇಕೆಂಬ ಕೂಗು ಕೇಳಿಬರುತ್ತಿದೆ. ಇದ್ದಕ್ಕಿದ್ದಂತೆ ಇದು ಮುನ್ನಲೆಗೆ ಬಂದಿದ್ದು, ಯಾವ ಕಾರಣಕ್ಕಾಗಿ ಎಂಬುದು ಯಾರಿಗೂ ಗೊತ್ತಿಲ್ಲ. ತೆರೆಯ ಹಿಂದೆ ಕುಳಿತವರೇ ಇದನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಹಿಂದೆಯೂ ವೀರಶೈವ ಲಿಂಗಾಯಿತ ಸಮುದಾಯವನ್ನು ಒಡೆದು ಧರ್ಮ ಮಾಡಲು ಹೊರಟ್ಟಿದ್ದರು. ಪರಿಣಾಮ ಏನಾಯಿತು ಎಂಬುದು ಗೊತ್ತು. ಯಾವುದೇ ಕಾರಣಕ್ಕೂ ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಮುಂದೆಯೂ ಆಗುವುದಿಲ್ಲ ಎಂದು ಎಚ್ಚರಿಸಿದ ಅವರು, ಇದಕ್ಕಾಗಿ ಸಮಾಜವನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಮುಖ್ಯವಾಗಿ ಆರ್ಥಿಕ, ಸಾಮಾಜಿಕ ಸಮೀಕ್ಷೆ ವಿಚಾರದಲ್ಲಿ ಸರ್ಕಾರಕ್ಕೆ ಯಾಕಿಷ್ಟು ಆತುರ? ಒಕ್ಕಲಿಗ ಸಮುದಾಯ, ವೀರಶೈವ ಲಿಂಗಾಯತ ಸಮುದಾಯ ಎಲ್ಲದರಲ್ಲೂ ಬಡವರಿದ್ದಾರೆ. ಮುಖ್ಯಮಂತ್ರಿಗಳು ಯಾಕೆ 15 ದಿನದಲ್ಲೇ ಸಮೀಕ್ಷೆ ಮುಗಿಸಬೇಕೆಂಬ ತರಾತರಿಯಲ್ಲಿದ್ದಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು.

ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂಬ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದನ್ನು ಬಹಿರಂಗವಾಗಿ ಹೇಳುವುದು ಬೇರೆ. ಆದರೆ ಅಂತರಂಗದಲ್ಲಿ ಏನು ಇದೆ ಅದನ್ನು ಮಾಡುವುದು ಬೇರೆ. ಹಿಂದೆ ಸಿಎಂ ಆಗಿದ್ದಾಗ ಬಸವೇಶ್ವರರ ಫೋಟೋ ಇಡಬೇಕೆಂದು ಹೇಳಿ ಆದೇಶ ಮಾಡಿಸಿದ್ದರು. ಬಳಿಕ ಪ್ರತ್ಯೇಕ ಧರ್ಮ ಮಾಡಲು ಹೊರಟರು ಎಂದು ಟೀಕಿಸಿದರು.

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡುವುದಕ್ಕೆ ಸ್ವಾಗತವಿದೆ. ಆದರೆ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

Tags:
error: Content is protected !!