Why isn't Prakash Rai protest in Andhra Pradesh and Tamil Nadu M.B. Patil questions
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಹಾಗೂ ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ.
ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೆ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ.
ಅಲ್ಲದೇ ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಬಹುಭಾಷಾ ನಟ ಪ್ರಕಾಶ್ ರೈಗೆ ಇವೆಲ್ಲಾ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.
ನಟ ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇವೆ. ರೈತ ಮುಖಂಡ ಬಯ್ಯಾರೆಡ್ಡಿ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲಾ ಅರಿಯಬೇಕು ಎಂದು ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…