ರಾಜ್ಯ

ಕೇವಲ 2 ಸೀಟಿಗಾಗಿ ಮೈತ್ರಿ ಬೇಕಿತ್ತಾ: ಎಚ್‌.ಡಿ ಕುಮಾರಸ್ವಾಮಿ ಬೇಸರ!

ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಇದೀಗ ಮೈತ್ರಿ ಬಗ್ಗೆ ಅಪಸ್ವರ ಕೇಳಲಾರಂಭಿಸಿದೆ.

ಬೆಂಗಳೂರಿನಲ್ಲಿಂದು ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೀಟು ಹೊಂದಾಣಿಕೆ ಬಗ್ಗೆ ಮಾತುಕತೆಗೆ ಕೂತಾಗ ತಾವು ಬೇಡಿಕೆ ಇಟ್ಟಿದ್ದು ಕೇವಲ 3-4 ಸೀಟುಗಳಿಗೆ ಮಾತ್ರ. ತಮ್ಮ ಸಾಮರ್ಥ್ಯದ ಬಗ್ಗೆ ಸಂಪೂರ್ಣ ಅರಿವಿದೆ ಮತ್ತು ಬಿಜೆಪಿಗೂ ಅದು ಗೊತ್ತಿದೆ. ಹಾಸನ ಮತ್ತು ಮಂಡ್ಯದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದರೂ ಗೆಲ್ಲುತ್ತದೆ. ಕೇವಲ ಎರಡು ಸೀಟುಗಳಿಗಾಗಿ ತಾನು ಇಷ್ಟೆಲ್ಲ ಪ್ರಯತ್ನ, ಹೋರಾಟ ಮಾಡಬೇಕಿತ್ತೇ? ಎಂದು ಕುಮಾರಸ್ವಾಮಿ ಬೇಸರದಲ್ಲಿ ಪ್ರಶ್ನಿಸಿದರು.

ಕರ್ನಾಟಕದ ರಾಜಕಾರಣವೇ ಬೇರೆ ಭಾರತದ ಉಳಿದ ಭಾಗಗಳಲ್ಲಿನ ರಾಜಕೀಯ ಚಿತ್ರಣವೇ ಬೇರೆ, ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಕಾರ್ಯಕರ್ತರ ಶ್ರಮವೇ ಬಿಜೆಪಿಗೆ ನೆರವಾಗಲಿದೆ ಎಂದು ಎಚ್‌ಡಿಕೆ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

13 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago