ರಾಜ್ಯ

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೆ ದಲಿತ ಸಿಎಂ ಬಗ್ಗೆ ಮಾತನಾಡಿದ್ದಾರೆ.

ಬಿಜೆಪಿ ಬಂದರೆ ಲಿಂಗಾಯತರು ಸಿಎಂ ಆಗುತ್ತಾರೆ. ಜೆಡಿಎಸ್‌ ಬಂದರೆ ಒಕ್ಕಲಿಗರು ಮುಖ್ಯಮಂತ್ರಿಯಾಗುತ್ತಾರೆ. ಇದರಿಂದ ಬೇರೆ ಸಮುದಾಯಕ್ಕೆ ನ್ಯಾಯ ಎಲ್ಲಿ ಕೊಟ್ಟ ಹಾಗೆ ಆಗುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತರು ಯಾಕೆ ಸಿಎಂ ಆಗಬಾರದು? ಅಲ್ಪಸಂಖ್ಯಾತರು ಯಾಕೆ ಸಿಎಂ ಆಗಬಾರದು? ವಾಸ್ತವಾಂಶ ಹೇಳಿದರೆ ಅದು ಬಹಳ ಜನಕ್ಕೆ ಹಿಡಿಸುವುದಿಲ್ಲ ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

17 mins ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

18 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

38 mins ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

52 mins ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

5 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

6 hours ago