ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸೋರೋದು ತನಿಖೆ ವೇಳೆ ಬಯಲಾಗಿದೆ.
ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಮೇಲ್ವಿಚಾರಕ ವೀರಭದ್ರ ಹಾಗೂ ಆತನ ಸ್ನೇಹಿತ ಅನಿಲ್ ಇತರ ಆರೋಪಿಗಳಾಗಿದ್ದಾರೆ. ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಶರಣಮ್ಮ ಮತ್ತು ವೀರಭದ್ರ ನಡುವೆ ಸಂಬಂಧವಿತ್ತು. ಆಕೆಯ ಪತಿಗೆ ಇದು ತಿಳಿದಾಗ, ವೀರಭದ್ರನಿಂದ ದೂರವಿರಲು ಎಚ್ಚರಿಸಿದರು. ಇದರಿಂದ ಕೋಪಗೊಂಡ ಶರಣಮ್ಮ ಮತ್ತು ವೀರಭದ್ರ, ಸುರೇಶ್ ಅವರನ್ನು ಕೊಲ್ಲಲು ಯೋಜಿಸಿದ್ದರು ಎನ್ನಲಾಗಿದೆ.
ಭಾನುವಾರ, ಸುರೇಶ್ ಕುಡಿದ ಮತ್ತಿನಲ್ಲಿದ್ದಾಗ, ಶರಣಮ್ಮ ವೀರಭದ್ರನನ್ನು ಮನೆಗೆ ಕರೆದಿದ್ದಾಳೆ. ನಂತರ ಆತನ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ತಲೆಗೆ ಹೊಡೆದು ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ. ನಂತರ ಅನಿಲ್‌ಗೆ ಕರೆ ಮಾಡಿ ಸುರೇಶ್‌ನ ಶವವನ್ನು ಕಾರಿನಲ್ಲಿ ಗಂಗೊಂಡನಹಳ್ಳಿಗೆ ಸಾಗಿಸಿದ್ದಾರೆ. ಸಾಕ್ಷಿ ನಾಶಮಾಡಲು ಅವರು ಪೆಟ್ರೋಲ್ ಸುರಿದು, ದೇಹವನ್ನು ಸುಟ್ಟು ಹಾಕಿದರು. ಶರಣಮ್ಮ ತನ್ನ ಮನೆಯಿಂದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…