ರಾಜ್ಯ

ದರ್ಶನ್‌ ಬಿಡುಗಡೆಯಾದರೆ ಕರೆತರಲು ಹೆಲಿಕಾಪ್ಟರ್‌ ಬುಕ್‌ ಮಾಡಿರುವ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17ಆರೋಪಿಗಳು ಜೈಲು ಸೇರಿದ್ದು. ಈ ಪೈಕಿ ಈಗಾಗಲೇ 3ಜನರಿಗೆ ಜಾಮೀನು ಮಂಜೂರಾಗಿದೆ. ಸೆ.27ರಂದು ದರ್ಶನ್‌ ಅರ್ಜಿ ವಿಚಾರಣೆ ನಡೆಸಿ, ಸೆ.30ಕ್ಕೆ (ಅಂದರೆ ಇಂದು) ಮುಂದೂಡಿತ್ತು. ಹೀಗಾಗಿ ಇಂದು ದರ್ಶನ್‌ ಪರ ಅರ್ಜಿ ವಿಚಾರಣೆ ನಡೆಯಲಿದೆ.

ಈ ನಡುವೆ ದರ್ಶನ್‌ ಬಿಡುಗಡೆಯಾದರೆ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್‌ ಬುಕ್‌ ಮಾಡಿರುವ ಅಪ್ಡೇಟ್‌ವೊಂದು ಸಿಕ್ಕಿದೆ. ಇಂದಿನ ವಿಚಾರಣೆಯಲ್ಲಿ ದರ್ಶನ್‌ ಬಿಡುಗಡೆಯಾಗಲಿದ್ದಾರೆ ಎನ್ನುವ ಭರವಸೆಯಿಂದ ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕಾಪ್ಟರ್‌ ಅನ್ನು ಕಾಯ್ದಿರಿಸಲಾಗಿದೆ ಎನ್ನಲಾಗಿದೆ.

ಬೆಂಗಳೂರು ಪರಪ್ಪನ ಆಗ್ರಹಾರದಲಿದ್ದ ದಾಸ ಬಳ್ಳಾರಿಯ ಸೆಂಟ್ರಲ್‌ ಜೈಲು ಸೇರಿದ್ದಾರೆ. ಇತ್ತ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮಿಹಾಗೂ ಕುಟುಂಬ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅಭಿಮಾನಿಗಳು ಕೂಡ ನೆಚ್ಚಿನ ನಟನ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಹೀಗಾಗಿ, ದರ್ಶನ್‌ ಬಿಡುಗಡೆ ಆದ ಮೇಲೆ ಬೆಂಗಳೂರಿಗೆ ರಸ್ತೆ ಮೂಲಕ ಕರೆತಂದರೆ ಅಭಿಮಾನಿಗಳ ದಂಡು ನೆರೆಯುತ್ತದೆ ಎಂದು ವಿಜಯಲಕ್ಷ್ಮಿ ಅವರು ಹೆಲಿಕಾಪ್ಟರ್‌ ಬುಕ್‌ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

20 mins ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

1 hour ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

1 hour ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

2 hours ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

3 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

4 hours ago