Mysore
25
overcast clouds

Social Media

ಬುಧವಾರ, 20 ಮೇ 2026
Light
Dark

ಕಾಡಾನೆ ದಾಳಿ: ಮಹಿಳೆಗೆ ಗಂಭೀರ ಗಾಯ

ಹಾಸನ: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿ, ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೇಲೂರು ತಾಲೂಕಿನ ಚಿಕ್ಕಸಾಲಾವರ ಗ್ರಾಮದ ಬಳಿ ನಡೆದಿದೆ.

ಭಾನುವಾರ ಬೆಳಿಗ್ಗೆ ಉಮೇಶ್‌ ಹಾಗೂ ರೇವತಿ (55) ದಂಪತಿ ಬೈಕ್‍ನಲ್ಲಿ ಕೆಲಸಕ್ಕೆ ತೆರಳುವ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೇವತಿಯರ ತಲೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಅರೆಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಾಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್‌ ಠಾಣಾ ಪ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:
error: Content is protected !!