ಹಾಸನ: ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿ, ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೇಲೂರು ತಾಲೂಕಿನ ಚಿಕ್ಕಸಾಲಾವರ ಗ್ರಾಮದ ಬಳಿ ನಡೆದಿದೆ.
ಭಾನುವಾರ ಬೆಳಿಗ್ಗೆ ಉಮೇಶ್ ಹಾಗೂ ರೇವತಿ (55) ದಂಪತಿ ಬೈಕ್ನಲ್ಲಿ ಕೆಲಸಕ್ಕೆ ತೆರಳುವ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೇವತಿಯರ ತಲೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.
ಅರೆಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಾಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ಪ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…