Mysore
29
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ.

ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ನೋಬಿದ್ನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ.

ಕಾಡಾನೆ ದಾಳಿಯಲ್ಲಿ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಟಿಸಲಗ ಪ್ರವಾಸಿಗರ ಮೇಲೆ ದಾಳಿ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!